ಕಡಬ: ಮೋರಿಗೆ ಡಿಕ್ಕಿ ಹೊಡೆದ ಬೈಕ್| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.

Ad Widget ... ..

ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ.

Ad Widget

ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *