ಸಮಗ್ರ ನ್ಯೂಸ್: ಒಡಿಶಾದ ಗಡಿಯಲ್ಲಿರುವ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯ ಅರಣ್ಯದಲ್ಲಿ ನಡೆದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಮಾವೋವಾದಿ ಕಮಾಂಡರ್ ಜೈ ರಾಮ್ ಸೇರಿ ಕನಿಷ್ಠ 14 ಮಂದಿ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಕಾರ್ಯಾಚರಣೆಯ ನಂತರ ವಶಪಡಿಸಿಕೊಂಡ ಮೃತದೇಹಗಳ ಆಧಾರದ ಮೇಲೆ 14 ಮಂದಿ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.