Ad Widget .

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ

ಸಮಗ್ರ ನ್ಯೂಸ್‌: ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಐದು ಪಂದ್ಯಗಳ ಟಿ20 ಸರಣಿಯು ನಾಳೆಯಿಂದ ಆರಂಭವಾಗಲಿದ್ದು, ಮೊದಲನೇ ಪಂದ್ಯ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಭಾರತ ತಂಡ ಸೋಲಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಜೋಸ್‌ ಬಟ್ಲರ್‌ ನಾಯಕತ್ವದ ಇಂಗ್ಲೆಂಡ್‌ ತಂಡ ಮೂರನೇ ಸ್ಥಾನದಲ್ಲಿದೆ.

Ad Widget . Ad Widget .

2024ರ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದ ಭಾರತ ತಂಡದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಲಾಗಿದ್ದು, ಯುವ ವೇಗಿ ಅರ್ಷದೀಪ್‌ ಸಿಂಗ್‌ ಅವರ ಜೊತೆ ಶಮಿ ವೇಗದ ಬೌಲಿಂಗ್‌ ವಿಭಾಗದಲ್ಲಿ ಕೈ ಜೋಡಿಸಲಿದ್ದಾರೆ. ಹಾರ್ದಿಕ್‌ ಪಾಂಡ್ಯ ಬದಲಿಗೆ ಅಕ್ಷರ್‌ ಪಟೇಲ್‌ಗೆ ಉಪ ನಾಯಕನ ಸ್ಥಾನವನ್ನು ನೀಡಲಾಗಿದೆ.

Ad Widget . Ad Widget .

ಇಂಗ್ಲೆಂಡ್‌ ತಂಡವನ್ನು ಜೋಸ್‌ ಬಟ್ಲರ್‌ ಅವರು ಮುನ್ನಡೆಸುವ ಜೊತೆಗೆ ವಿಕೆಟ್‌ ಕೀಪಿಂಗ್‌ ಜವಾಬ್ದಾರಿಯನ್ನು ಕೂಡ ನಿರ್ವಹಿಸಲಿದ್ದಾರೆಂದು ಮುಖ್ಯ ಕೋಚ್‌ ಬ್ರೆಂಡನ್‌ ಮೆಕಲಮ್‌ ಸ್ಪಷ್ಟಪಡಿಸಿದ್ದಾರೆ. ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಭಾರತ ತಂಡ ಒಟ್ಟು 7 ಟಿ20 ಪಂದ್ಯಗಳನ್ನು ಆಡಿದೆ. ಇದರಲ್ಲಿ ಆರು ಪಂದ್ಯಗಳಲ್ಲಿ ಗೆಲುವು ಪಡೆದಿದ್ದರೆ, 2011ರಲ್ಲಿ ಇಂಗ್ಲೆಂಡ್‌ ವಿರುದ್ಧ ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ.

Leave a Comment

Your email address will not be published. Required fields are marked *