Ad Widget .

ಮಂಗಳೂರು: ಸಲೂನ್ ಮೇಲೆ‌ ದಾಳಿ ಪ್ರಕರಣ| ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಪ್ರಸಾದ್ ಅತ್ತಾವರ ಬಂಧನ

ಸಮಗ್ರ ನ್ಯೂಸ್: ಮಂಗಳೂರು ಬಿಜೈನ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಗೃಹ ಸಚಿವ ಜಿ ಪರಮೇಶ್ವರ್ ಸೂಚನೆ ನೀಡಿದ ಬೆನ್ನಲ್ಲೆ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Ad Widget . Ad Widget .

ನಗರದ ಸಲೂನ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಸಾದ್ ಅತ್ತಾವರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

Leave a Comment

Your email address will not be published. Required fields are marked *