Ad Widget .

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ| ಇಂದು ಹುಟ್ಟುವ ಹೆಣ್ಣುಮಗುವಿಗೆ ಸಿಗಲಿದೆ ಸ್ಪೆಷಲ್ ಗಿಪ್ಟ್

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶುಕ್ರವಾರ(ಜ.24) ಜನಿಸುವ ಎಲ್ಲ ಹೆಣ್ಣು ಮಗುವಿಗೆ ವಿಶೇಷ ಉಡುಗೊರೆ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Ad Widget . Ad Widget .

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಅನುಸಾರ ಇಲಾಖೆ ಈ ಅಭಿಯಾನ ಹಮ್ಮಿಕೊಂಡಿದೆ. ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಳ ಹಾಗೂ ಹೆಣ್ಣು ಭ್ರೂಣ ಹತ್ಯೆ ತಡೆಯುವ ಜಾಗೃತಿ ಕಾರ್ಯಕ್ರಮದ ಭಾಗ ಇದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ‘ಪಿಂಕ್ ಲೈಟ್’ ಬೆಳಗಲೂ ಸೂಚಿಸಲಾಗಿದೆ. ಶುಕ್ರವಾರ ಜನಿಸಿದ ಹೆಣ್ಣು ಮಗುವಿನ ಕುಟುಂಬಕ್ಕೆ ₹ 1,000 ಮೌಲ್ಯದ ಮಕ್ಕಳ ಕಿಟ್‌ಗಳನ್ನು ಒದಗಿಸಲು ಆರೋಗ್ಯಾಧಿಕಾರಿಗಳಿಗೆ ಇಲಾಖೆ ನಿರ್ದೇಶಿಸಿದೆ.

Ad Widget . Ad Widget .

ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಹೆಣ್ಣುಮಕ್ಕಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹೆಣ್ಣುಮಕ್ಕಳ ಆರೋಗ್ಯ ಕಾಪಾಡಲು ಇಲಾಖೆಯು ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ‘ಅನಿಮೀಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ’ಯು ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ‘ಶುಚಿ ಯೋಜನೆ’, ‘ಜನನಿ ಸುರಕ್ಷಾ ಯೋಜನೆ’ಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣು ಭ್ರೂಣ ಹತ್ಯೆಗಳನ್ನ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *