Ad Widget .

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

Ad Widget . Ad Widget . Ad Widget .

ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ.

Ad Widget .

ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್ ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *