ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ ಹೇಳಿದ್ದಾರೆ.

Ad Widget ... ..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ. ಜನವರಿ 30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಿಸಲು ಕಾನೂನು ಕರಡು ಪ್ರತಿಯನ್ನು ಅನುಭವಿ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ. ಕಾನೂನು ಜಾರಿಯಾದ ಮೇಲೆ ಇದರಲ್ಲಿ ಶಕ್ತಿ ಇಲ್ಲ ಎನ್ನುವಂತಾಗಬಾರದು. ಇದಕ್ಕಾಗಿ ಕಂದಾಯ ಅಧಿಕಾರಿ, ಪೊಲೀಸ್ ಅಧಿಕಾರಿಗಳಿಗೆ ಕರಡು ಪ್ರತಿ ನೀಡಲಾಗಿದ್ದು, 3-4 ದಿನಗಳಲ್ಲಿ ಕಾನೂನು ಸ್ವರೂಪ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

Ad Widget

ಜನವರಿ 30ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಕರಡು ಪ್ರತಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ. ಅಷ್ಟರೊಳಗೆ ಗೃಹ ಸಚಿವರು, ಕಂದಾಯ ಸಚಿವರು, ಉಪಮುಖ್ಯಮಂತ್ರಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ಮುಖ್ಯಮಂತ್ರಿಗಳಿಗೆ ಪ್ರತಿ ಸಲ್ಲಿಸಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *