Ad Widget .

ದೇಶದ ಹೆಸರು ಕೆಡಿಸಲು ಕಾಂಗ್ರೆಸ್ ಪ್ರಯತ್ನ – ಸಚಿವ ರಾಜೀವ್ ಚಂದ್ರಶೇಖರ್ ಆರೋಪ

Ad Widget . Ad Widget .

ಮಂಗಳೂರು: ‘ದೇಶ ಮೊದಲು ಎನ್ನುವುದು ಬಿಜೆಪಿಯ ನಿಲುವು. ಕಾಂಗ್ರೆಸ್‌ನವರಿಗೆ ಇಂತಹ ಯಾವುದೇ ಬದ್ಧತೆ ಇಲ್ಲ. ಭಾರತವು ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆಯುವುದನ್ನು ತಡೆದು, ದೇಶದ ಹೆಸರನ್ನು ಕೆಡಿಸುವುದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಪ್ರಯತ್ನವಾಗಿದೆ’ ಎಂದು ಕೇಂದ್ರ ಕೌಶಲಾಭಿವೃದ್ಧಿ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

Ad Widget . Ad Widget .

ಬಿಜೆಪಿ ಜನಾಶೀರ್ವಾದ ಯಾತ್ರೆ ಪ್ರಯುಕ್ತ ಬುಧವಾರ ಇಲ್ಲಿ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಆಡಳಿತ ನಡೆಸಿದ 60 ವರ್ಷಗಳಲ್ಲಿ ಆಗದ ಸುಧಾರಣೆ ದೇಶದಲ್ಲಿ ಏಳು ವರ್ಷಗಳಲ್ಲಿ ಆಗಿದೆ. ಕಾಂಗ್ರೆಸ್ ಭ್ರಷ್ಟಾಚಾರ ಮಾಡಿ ದೇಶವನ್ನು ಲೂಟಿ ಮಾಡಿರುವುದು ಗೊತ್ತಿರುವ ಸಂಗತಿ. ಬಿಜೆಪಿ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ವರದಿಯಾಗಿಲ್ಲ ಎಂದರು.

ಮೀನುಗಾರಿಕೆ ಸಚಿವ ಎಸ್.ಅಂಗಾರ ಮಾತನಾಡಿ, ‘ಸಂಘಟನೆಯನ್ನು ಬಲಪಡಿಸುವ ಕಾರ್ಯ ಆಗಬೇಕಾಗಿದೆ. ಸಂಘಟನೆ ಯಶಸ್ವಿಯಾದರೆ ಮಾತ್ರ ನಾವು ಸಾಧನೆ ಮಾಡಲು ಸಾಧ್ಯ’ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಸ್ವಾಗತಿಸಿದರು. ಜನಾರ್ಶೀವಾದ ಯಾತ್ರೆಯ ಸಂಚಾಲಕ ಸಂಜೀವ ಮಠಂದೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ ವಂದಿಸಿದರು.

Leave a Comment

Your email address will not be published. Required fields are marked *