ಮಂಗಳೂರು: ಉತ್ತರ ‌ಸಂಚಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಷರೀಪ್ ಲೋಕಾಯುಕ್ತ ಬಲೆಗೆ

ಸಮಗ್ರ ನ್ಯೂಸ್: ಠಾಣೆಯಿಂದ
ಸ್ಕೂಟರ್‌ ಬಿಡುಗಡೆಗೊಳಿಸಲು ಲಂಚ ಪಡೆದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹಮ್ಮದ್ ಷರೀಫ್‌ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

Ad Widget ... ..

‘ಪೊಲೀಸರ ವಶದಲ್ಲಿದ್ದ ಸ್ಕೂಟರ್‌ ಬಿಡುಗಡೆಗೊಳಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಸಲುವಾಗಿ ದೂರುದಾರರು ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿ ಮಾಡಿದ್ದರು. ಸ್ಕೂಟರ್‌ ಬಿಡುಗಡೆಗೊಳಿಸಲು ₹ 5ಸಾವಿರ ಲಂಚ ನೀಡುವಂತೆ ಷರೀಫ್‌ ಬೇಡಿಕೆ ಇಟ್ಟಿದ್ದರು. ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ ಬರಹಗಾರರಾದ ನಾಗರತ್ನ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಆಕೆಯ ಬಳಿ ಹೋದಾಗ, ಅವಾಚ್ಯವಾಗಿ ಬೈದು ₹ 3 ಸಾವಿರ ಲಂಚ ನೀಡುವಂತೆ ಹೇಳಿದ್ದರು. ಲಂಚ ನೀಡಲು ಮನಸ್ಸಿಲ್ಲದ ಕಾರಣ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು’ ಎಂದು ಲೋಕಾಯುಕ್ತ ಪೊಲೀಸರರು ತಿಳಿಸಿದ್ದಾರೆ.

Ad Widget

‘ದೂರುದಾರ ವ್ಯಕ್ತಿಯಿಂದ ಸೋಮವಾರ ₹ 3 ಸಾವಿರವನ್ನು ಪಡೆದ ತಕ್ಷಣ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ ) ನಂದಿನಿ ಬಿ.ಎನ್, ಡಿವೈಎಸ್‌ಪಿ ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್‌ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಠಾಣೆಯ ಇನ್‌ಸ್ಪೆಕ್ಟರ್‌ ಮಂಜುನಾಥ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *