ಹಂಪಿ ಉತ್ಸವ ೨೦೨೫/ ಲಾಂಛನ ಬಿಡುಗಡೆ

ಸಮಗ್ರ ನ್ಯೂಸ್‌: ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ 2025ರ ಹಂಪಿ ಉತ್ಸವದ ಲಾಂಛನವನ್ನು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಬಿದುಗಡೆಗೊಳಿಸಿದರು.

Ad Widget ... ..

ಫೆ. 28, ಮಾ. 1, 2ರಂದು 3 ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದ್ದು, ಕಳೆದ ಬಾರಿಗಿಂತಲೂ ಈ ಬಾರಿ ಇನ್ನಷ್ಟು ಅದ್ದೂರಿಯಾಗಿ ಮಾಡಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಳ್ಳುತ್ತಿದೆ. ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ಕೊಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಆದರೆ ಉತ್ಸವದಲ್ಲಿ ಯಾವೆಲ್ಲ ಕಲಾವಿದರು ಇರಲಿದ್ದಾರೆ ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ. ಹಂಪಿ ಉತ್ಸವದ ವೇಳೆ 1 ವಾರ ವಿಜಯನಗರ ಜಿಲ್ಲೆಯಲ್ಲೇ ಠಿಕಾಣಿ ಹೂಡುತ್ತೇನೆ ಎಂದು ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಹೇಳಿದ್ದಾರೆ. ಎಲ್ಲರೂ ಸೇರಿ ವಿಜೃಂಭಣೆಯಿಂದ ಹಂಪಿ ಉತ್ಸವ ಮಾಡೋಣ ಎಂದು ಕರೆಯನ್ನೂ ನೀಡಿದ್ದಾರೆ.

Ad Widget

ಫೆ. 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದು, ಮಾ. 1 ಮತ್ತು 2ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Leave a Comment

Your email address will not be published. Required fields are marked *