ಸ್ಯಾಂಡಲ್ ವುಡ್ ನಟ ಗಿರಿ ದಿನೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ಸಿನಿಮಾದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ.

Ad Widget ... ..

ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿತು. ಏಕಾಏಕಿ ಕುಸಿದು ಬಿದ್ದ ಗಿರಿ ದಿನೇಶ್ ಅವರನ್ನು ಕೂಡಲೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಗಿರಿ ದಿನೇಶ್ ನಿಧನರಾಗಿದ್ದಾರೆ.

Ad Widget

ಗಿರಿ ದಿನೇಶ್ ಅವರು ನವಗ್ರಹ, ವಜ್ರ ಹಾಗೂ ‘ಚಮ್ಕಾಯ್ಸಿ ಚಿಂದಿ ಉಡಾಯ್ಸಿ’ ಚಿತ್ರಗಳಲ್ಲಿ ನಟಿಸಿದ್ದರು. ಇಂದು ಗಿರಿ ದಿನೇಶ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *