ದೆಹಲಿ ವಿಧಾನಸಭಾ ಚುನಾವಣೆ| ಮೂಲೆ ಸೇರಿದ ಪೊರಕೆ; ಹ್ಯಾಟ್ರಿಕ್ ಸೊನ್ನೆ ಸುತ್ತಿದ ಕೈ| ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಕಹಳೆ

ಸಮಗ್ರ ನ್ಯೂಸ್: 2025 ರ ದೆಹಲಿ ಚುನಾವಣೆಯ ಫಲಿತಾಂಶಗಳ ಚಿತ್ರಣ ಸ್ಪಷ್ಟವಾಗಿದೆ. 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿಯ ಬೃಹತ್ ಗೆಲುವಿನೊಂದಿಗೆ, ಆಮ್ ಆದ್ಮಿ ಪಕ್ಷದ ದೆಹಲಿ ಅಧ್ಯಾಯವು ಕೊನೆಯಾಗಿದೆ.

Ad Widget ... ..

ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಮತ್ತು ಜಂಗ್ಪುರದಿಂದ ಮನೀಶ್ ಸಿಸೋಡಿಯಾ ಚುನಾವಣೆಯಲ್ಲಿ ಸೋತಿದ್ದಾರೆ. ಆಪ್​ಗೆ ಇರುವ ಇರುವ ಒಂದೇ ಒಂದು ಸಮಾಧಾನಕರ ವಿಚಾರವೆಂದರೆ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಇಲ್ಲಿಯವರೆಗಿನ ಫಲಿತಾಂಶಗಳನ್ನು ನೋಡಿದರೆ, ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ, ಆದರೆ ಆಮ್ ಆದ್ಮಿ ಪಕ್ಷವು 23 ಸ್ಥಾನಗಳಿಗೆ ಸೀಮಿತವಾಗಿದೆ.

Ad Widget

ಇನ್ನು ಬಿಜೆಪಿ ಕಚೇರಿಯಲ್ಲಿ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರೇ ಸಂಜೆ ಐದು ಗಂಟೆ ಸುಮಾರಿಗೆ ಬಿಜೆಪಿ ಕಚೇರಿಗೆ ತೆರಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Leave a Comment

Your email address will not be published. Required fields are marked *