ಸಮಗ್ರ ನ್ಯೂಸ್: ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಿ ಅನುಮೋದಿಸಲಾಗಿದೆ.
ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.ಈ ಹಿಂದೆ ರಾಜ್ಯ ಸರಕಾರ ಕಳುಹಿಸಿಕೊಟ್ಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ, ಕೆಲವು ಸ್ಪಷ್ಟನೆ ಹಾಗೂ ಸಲಹೆಗಳೊಂದಿಗೆ ಕಡತವನ್ನು ವಾಪಸ್ ಕಳಿಸಿದ್ದರು.
ಹೀಗಾಗಿ ರಾಜ್ಯ ಸರಕಾರ ಮತ್ತೊಮ್ಮೆ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಅಂತಿಮವಾಗಿ ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.