ಸಮಗ್ರ ನ್ಯೂಸ್: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ.
ಮೃತರನ್ನು ರಾಹುಲ್ (18) ಬಿಕೇಶ್ (20) ಲಲನ್ (24) ಎಂದು ಗುರುತಿಸಲಾಗಿದೆ.ಉತ್ತರ ಪ್ರದೇಶ ಮೂಲದ ಮೂವರು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು.
ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರ ಆಗಿ ಬಿದ್ದಿದೆ.
ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.