ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ವಿಚಾರವಾಗಿ ನಾನಾ ವಿವಿಧಾತ್ಮಕ ಹೇಳಿಕೆಗಳು ಮುನ್ನೆಲೆಗೆ ಬರುತ್ತಲೆ ಇರುತ್ತದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ಹೌದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದರು.
ಮುಂದುವರೆದು ಮಾತನಾಡಿದ ಅವರು ಬಿಜೆಪಿಯವರ ಮೇಲೆ ಹರಿಹಾಯ್ದಿದ್ದಾರೆ.
ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬಿಜೆಪಿಯವರಿಗೆ ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಉದ್ದೇಶ ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಯವರು ಬಡವರ ಪರ ಇಲ್ಲ. ಪ್ರತಿಭಟನೆ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ ಎಂದು ಟೀಕಿಸಿದರು.