ಸಮಗ್ರ ನ್ಯೂಸ್: ಇನ್ನೇನು SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ.
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ಮತ್ತು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ SSLC ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಪ್ರಸ್ತುತಪಡಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.