Ad Widget .

ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಫೆ.25 ರಂದು ಸಂಭವಿಸಿದೆ.

Ad Widget . Ad Widget . Ad Widget . Ad Widget .

ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು ಹೋಗಲು ಸಾಧ್ಯವಿಲ್ಲದ ಸ್ಥಳಗಳಲ್ಲಿ, ಸೊಪ್ಪು ಮತ್ತು ಇತರ ಸಾಧನಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ.

Ad Widget . Ad Widget .

ಇತ್ತೀಚಿನ ದಿನಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮತ್ತು ಕೆಮ್ಮಣ್ಣುಗುಂಡಿ ಪ್ರದೇಶಗಳಲ್ಲಿಯೂ ಕಾಡ್ಗಿಚ್ಚು ಸಂಭವಿಸಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬಿಸಿಲಿನ ತಾಪದಿಂದ ಬೆಂಕಿ ಹಬ್ಬಿ, ನೂರಾರು ಎಕರೆ ಅಪರೂಪದ ಸಸ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ . ಕೆಮ್ಮಣ್ಣುಗುಂಡಿ ಗಿರಿಧಾಮದ ವ್ಯಾಪ್ತಿಯಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ .

ಈ ಘಟನೆಗಳು ಬಿಸಿಲಿನ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ಸಂಭವಿಸುತ್ತಿದ್ದು, ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಅರಣ್ಯ ಇಲಾಖೆ ಮತ್ತು ಸ್ಥಳೀಯರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕಾಡ್ಗಿಚ್ಚು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದಾರೆ.

Leave a Comment

Your email address will not be published. Required fields are marked *