Ad Widget .

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. 

Ad Widget . Ad Widget . Ad Widget . Ad Widget .

ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ  ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ  ಹಂಪಿ ಉತ್ಸವವು ಫೆಬ್ರುವರಿ  28 ರಿಂದ ಮಾರ್ಚ್  2 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದೆ. 

Ad Widget . Ad Widget .

ಉತ್ಸವದ ಪ್ರಯುಕ್ತ ಹಲವು ವಿಚಾರಗಳಲ್ಲಿ ಗೋಷ್ಠಿಗಳು ನಡೆಯಲಿದ್ದು,  ಮಹಿಳಾ ವಿಚಾರ ಗೋಷ್ಠಿಯಲ್ಲಿ ಡಾ. ಅನುರಾಧಾ ಕುರುಂಜಿಯವರು “ವಿಜಯನಗರ ಕಾಲದ ಮಹಿಳೆ ಮತ್ತು ಮನೋರಂಜನಾ ಕ್ರೀಡೆಗಳು” ಎಂಬ ವಿಷಯದ ಕುರಿತು  ಪ್ರಬಂಧ ಮಂಡಿಸಲಿದ್ದಾರೆ. 

ಈ ಹಿಂದೆ ಹಂಪಿ ಉತ್ಸವದ ಕವಿಗೋಷ್ಠಿಯಲ್ಲೂ ಭಾಗವಹಿಸಿರುವ ಇವರು ಈಗಾಗಲೇ 20ಕ್ಕೂ ಅಧಿಕ ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ವಿಚಾರಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ಕುರುಂಜಿ ಪದ್ಮಯಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ, ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Leave a Comment

Your email address will not be published. Required fields are marked *