Ad Widget .

ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹವಾಮಾನ ಭಾರೀ ಬದಲಾವಣೆಗಳು ಆಗುತ್ತಿವೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೆ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಸಹ ಭಾರತೀಯ ಹವಾಮಾನ ಇಲಾಖೆ ನೀಡಿದೆ.

Ad Widget . Ad Widget . Ad Widget . Ad Widget .

ಕರ್ನಾಟಕದಲ್ಲಿ ಕಳೆದ 15 ದಿನಗಳಿಂದ ಬಿಸಿಲು ಹೆಚ್ಚಳವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕಳೆದ 1 ತಿಂಗಳಿನಿಂದಲೂ ಚಳಿ ತೀವ್ರ ಕಡಿಮೆಯಾಗಿದ್ದು. ಬಿಸಿಲಿನ ಝಳ ಪ್ರಾರಂಭವಾಗಿದೆ. ಇದೀಗ ಕರ್ನಾಟಕದ ವಿವಿಧ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆ ಹಾಗೂ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಫೆಬ್ರವರಿ 28ರ ವರೆಗೆ ಕರ್ನಾಟಕ ಹಾಗೂ ದೇಶದ ವಿವಿಧ ಭಾಗದಲ್ಲಿ ಹವಾಮಾನ ಯಾವ ರೀತಿ ಇರಲಿದೆ ಎನ್ನುವ ವಿವರ ಇಲ್ಲಿದೆ.

Ad Widget . Ad Widget .

ರಾಜ್ಯದ ವಿವಿಧ ಭಾಗದಲ್ಲಿ ಹವಾಮಾನ ವೈಪರೀತ್ಯ ಶುರುವಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಧಾರಣ ಮಳೆ ಸಹ ಆಗಿಲ್ಲ. ಮಳೆಯಾಗದೆ ಇರುವುದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ನೀರಿನ ಸಮಸ್ಯೆ ಆಗಲಿದೆಯೇ ಎನ್ನುವ ಆತಂಕವೂ ಶುರುವಾಗಿದೆ. ಬೆಂಗಳೂರಿನಲ್ಲಿ ಜಲಮಂಡಳಿಯು ಈಗಾಗಲೇ ಎಚ್ಚೆತ್ತುಕೊಂಡಿದ್ದು. ಕಾವೇರಿ ನೀರನ್ನು ಅನವಶ್ಯಕವಾಗಿ ಬಳಕೆ ಮಾಡದಂತೆ ಮುನ್ನೆಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ, ಕಳೆದ ವರ್ಷದಂತೆಯೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗುವ ಆತಂಕವೂ ಇದೆ.

ಕರ್ನಾಟಕದಲ್ಲಿ ಶಾಖ ಅಲೆಯ ಎಚ್ಚರಿಕೆ:
ಇನ್ನು ನೆರೆಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು. ಬೆಂಗಳೂರಿನಲ್ಲೂ ಮುಂದಿನ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಈ ನಡುವೆ ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಶಾಖದ ಅಲೆಯಿಂದ ಬಿಸಿಲು ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

ಫೆಬ್ರವರಿ 25ರಿಂದ 27 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಯ ಪ್ರದೇಶಗಳಲ್ಲಿ ಶಾಖದ ಅಲೆ ಇರಲಿದ್ದು. ಬಿಸಿಲಿ ಝಳ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಬಿಸಿಲು ಇದ್ದು. ಮುಂದಿನ ದಿನಗಳಲ್ಲಿ ಈ ಬಿಸಿಲು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಅವಧಿಗೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಬಿಸಿಲು ಇರಲಿದೆ ಎಂದು ಹೇಳಲಾಗಿದೆ.

ಈ ಭಾಗಗಳಲ್ಲಿ ಮಳೆ:
ದೇಶದ ವಿವಿಧ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಾರ್ಚ್‌ 3ರ ವರೆಗೆ ತಮಿಳುನಾಡಿನ ಕರಾವಳಿ, ದಕ್ಷಿಣ ಹಾಗೂ ಪಶ್ಚಿಮ ತಮಿಳುನಾಡಿನ ಕೆಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ. ಈ ಅವಧಿಯಲ್ಲಿ ರಾಮೇಶ್ವರಂ ,ತೂತುಕುಡಿ, ನೆಲ್ಲೈ ಹಾಗೂ ಕುಮಾರಿ ಘಾಟ್ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Leave a Comment

Your email address will not be published. Required fields are marked *