ಕುಡಿತ ಚಟದಿಂದ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ

ಸಮಗ್ರ ನ್ಯೂಸ್: ಮೈಸೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಹೌದು ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟುಕೊಂಡಿರುವಂತಹ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Ad Widget ... ..

ಬೆಂಕಿ ಹೊತ್ತಿಕೊಂಡು ಇಡೀ ಮನೆ ಅಗ್ನಿಗಾಹುತಿಯಾಗಿದ್ದು, ಬಟ್ಟೆ, ದವಸ ಧಾನ್ಯ, ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿವೆ. ಮೈಸೂರಿನಲ್ಲಿ ಕುಡಿತದ ದಾಸನಾಗಿದ್ದ ಗುರು, ಬೆಳಗ್ಗೆಯೇ ಕುಡಿದು ಬಂದು ಮತ್ತೆ ಕುಡಿಯಲು ಹಣ ಕೇಳಿದ್ದಾರೆ. ಈ ವಿಚಾರಕ್ಕೆ ಮನೆಯವರ ಜೊತೆ ಗಲಾಟೆ ಮಾಡಿಕೊಂಡು ಬೀಡಿ ಸೇದುತ್ತಿದ್ದರು. ಕುಡಿದ ನಶೆಯಲ್ಲಿ ಗುರು ಬೀಡಿ ಸೇದಿ ಬೆಡ್ ಮೇಲಿಟ್ಟಿದ್ದಾರೆ. ಹೀಗಾಗಿ ಹಾಸಿಗೆಗೆ ಹೊತ್ತಿಕೊಂಡಿದ್ದ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ಮನೆಯವರು ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಮನೆಯಲ್ಲಿ ಇದ್ದ ವಸ್ತುಗಳೆಲ್ಲಾ ಸುಟ್ಟುಹೋಗಿವೆ.

Ad Widget

Leave a Comment

Your email address will not be published. Required fields are marked *