ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ| ಯುವಕ ಬಂಧನ

ಸಮಗ್ರ ನ್ಯೂಸ್: ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಪೊಲೀಸರು ಮಾ.3 ರಂದು ಬಂಧಿಸಲಾಗಿದೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27) ಬಂಧಿತ ಆರೋಪಿಗಳು. ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ. ವ್ಯಾಗನಾರ್ ಕಾರು (ನಂ. ಕೆಎ 19 ಎನ್ 5049) ನಲ್ಲಿ 1.975 ಕೆ.ಜಿ ಗಾಂಜಾ ಸಿಕ್ಕಿದೆ .

Ad Widget

ಆರೋಪಿಯನ್ನು ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಶೇಖರ್ ಎಂ.ಆರ್, ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಸಿಬ್ಬಂದಿಗಳಾದ ರಮೇಶ್ ತುಳಜಣ್ಣನವರ್, ಶಂಕರ ಗುರವ ಹಾಗೂ ವಾಹನ ಚಾಲಕರಾದ ಪ್ರವೀಣ್ ಅವರು ಭಾಗವಹಿಸಿದ್ದರು. ಪ್ರಕರಣವನ್ನು ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ. ಮೂಡಿಗೆರೆ ಉಪವಿಭಾಗ ಇವರು ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *