ಅಯೋಧ್ಯೆ ರಾಮಮಂದಿರ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಮತ್ತು ಗುಜರಾತ್‌ನ ವಿಶ್ವಪ್ರಸಿದ್ಧ ಸೋಮನಾಥ ದೇಗುಲದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಎನ್ನಲಾದ ಶಂಕಿತ ಉಗ್ರನೊಬ್ಬನನ್ನು ಹರ್ಯಾಣ ಮತ್ತು ಗುಜರಾತ್‌ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರೀದಾಬಾದ್‌ನಲ್ಲಿ ಬಂಧಿಸಲಾಗಿದೆ.

Ad Widget ... ..

ಬಂಧಿತ ವ್ಯಕ್ತಿಯನ್ನು ಅಬ್ದುಲ್‌ ರೆಹಮಾನ್‌ (19) ಎಂದು ಗುರುತಿಸಲಾಗಿದೆ. ಈತ ವಿಶ್ವದ ಕುಖ್ಯಾತ ಉಗ್ರ ಸಂಘಟನೆಯಾದ ಐಸಿಸ್‌ ನಂಟು ಹೊಂದಿದ್ದು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಸೂಚನೆಯಂತೆ ದಾಳಿಗೆ ಸಂಚು ರೂಪಿಸಲಾಗಿದ್ದ ಎಂದು ಹೇಳಲಾಗಿದೆ.

Ad Widget

ಬಂಧನದ ಬೆನ್ನಲ್ಲೇ ರೆಹಮಾನ್‌ ನೀಡಿದ ಸುಳಿವಿನ ಮೇರೆಗೆ ಆತನ ಮನೆಯಿಂದ ಎರಡು ಗ್ರೆನೇಡ್‌ ವಶಕ್ಕೆ ಪಡೆಯಲಾಗಿದೆ. ಭಾನುವಾರವೇ ಅಬ್ದುಲ್‌ನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಆತನನ್ನು ಸೋಮವಾರ ಗುಜರಾತ್‌ಗೆ ಕರೆದೊಯ್ಯಲಾಗಿದೆ. ಈತನ ಬಂಧನದೊಂದಿಗೆ ದೊಡ್ಡ ಉಗ್ರ ಸಂಚೊಂದು ವಿಫಲವಾದಂತಾಗಿದೆ.

Leave a Comment

Your email address will not be published. Required fields are marked *