Ad Widget .

ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಅನುಭವಿ ಬ್ಯಾಟರ್‌ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ಅಚ್ಚರಿಯ ವಿದಾಯ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ಬೆನ್ನಲ್ಲೇ ಕ್ರಿಕೆಟಿಗ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ.

Ad Widget . Ad Widget . Ad Widget . Ad Widget .

ಭಾರತ ವಿರುದ್ಧದ ಸೆಮಿ ಕದನದಲ್ಲಿ 73 ರನ್ ಗಳಿಸಿದ ಅವರು ಆಸ್ಟ್ರೇಲಿಯಾ ಪರ ಗರಿಷ್ಠ ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಇದನ್ನೇ ತಮ್ಮ ಕೊನೆಯ ಏಕದಿನ ಪಂದ್ಯ ಎಂದು ತಂಡದ ಸಹ ಆಟಗಾರರಿಗೆ ತಿಳಿಸಿದರು. ಏಕದಿನ ಸ್ವರೂಪಕ್ಕೆ ವಿದಾಯ ಹೇಳಿದರೂ, 35 ವರ್ಷದ ಆಟಗಾರ ದೇಶದ ಪರ ಟೆಸ್ಟ್ ಹಾಗೂ ಟಿ20 ಪಂದ್ಯಗಳನ್ನು ಆಡುವುದನ್ನು ಮುಂದುವರೆಸಲಿದ್ದಾರೆ.

Ad Widget . Ad Widget .

“ಇದೊಂದು ಉತ್ತಮ ಪ್ರಯಾಣ, ಅದರ ಪ್ರತಿ ನಿಮಿಷವನ್ನೂ ನಾನು ಪ್ರೀತಿಸಿದ್ದೇನೆ. ಪ್ರಯಾಣದಲ್ಲಿ ಅದ್ಭುತ ಸಮಯ ಮತ್ತು ನೆನಪುಗಳಿವೆ. ನನ್ನ ಪಯಣದಲ್ಲಿ ಭಾಗವಾಗಿದ್ದ ತಂಡದ ಸಹ ಆಟಗಾರರೊಂದಿಗೆ ಎರಡು ವಿಶ್ವಕಪ್‌ಗಳನ್ನು ಗೆದ್ದಿರುವುದು ಪ್ರಮುಖ ಅಂಶ,” ಎಂದು ಸ್ಮಿತ್ ಹೇಳಿಕೊಂಡಿದ್ದಾರೆ.

“2027ರ ವಿಶ್ವಕಪ್‌ಗೆ ತಯಾರಿ ಆರಂಭಿಸಲು ದೇಶದ ಆಟಗಾರರಿಗೆ ಇದು ಉತ್ತಮ ಅವಕಾಶವಾಗಿದೆ. ಹೀಗಾಗಿ ವಿದಾಯ ಹೇಳಲು ಇದು ಸರಿಯಾದ ಸಮಯವೆಂದು ಭಾವಿಸುತ್ತೇನೆ. ಟೆಸ್ಟ್ ಕ್ರಿಕೆಟ್ ನನ್ನ ಆದ್ಯತೆಯಾಗಿ ಉಳಿದಿದೆ. ನಾನು ನಿಜವಾಗಿಯೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಚಳಿಗಾಲದಲ್ಲಿ ವೆಸ್ಟ್ ಇಂಡೀಸ್ ಮತ್ತು ನಂತರ ತವರಿನಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಆಡಲು ಎದುರು ನೋಡುತ್ತಿದ್ದೇನೆ. ಆ ವೇದಿಕೆಯಲ್ಲಿ ನಾನು ಇನ್ನೂ ಸಾಕಷ್ಟು ಕೊಡುಗೆ ನೀಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಸ್ಟೀವ್‌ ಸ್ಮಿತ್ ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳಲ್ಲಿ ಆಡಿ 12 ಶತಕ ಸಹಿತ 5800 ರನ್ ಗಳಿಸಿದ್ದಾರೆ. ಎರಡು ಏಕದಿನ ವಿಶ್ವಕಪ್‌ ಗೆದ್ದ ತಂಡದಲ್ಲಿ ಆಡಿದ್ದಾರೆ. 2015ರಲ್ಲಿ ಮೈಕಲ್ ಕ್ಲಾರ್ಕ್ ನಾಯಕತ್ವದಲ್ಲಿ ಹಾಗೂ ಭಾರತದಲ್ಲಿ ನಡೆದ 2023ರ ವಿಶ್ವಕಪ್‌ನಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದ ತಂಡಗಳ ಭಾಗವಾಗಿದ್ದರು.

Leave a Comment

Your email address will not be published. Required fields are marked *