ದೇವಾಲಯಕ್ಕೆನೇ ವಾಮಾಚಾರನ..?

ಸಮಗ್ರ ನ್ಯೂಸ್: ದೇವಾಲಯದ ಎದುರು ವಾಮಾಚಾರ ಮಾಡಿದ ಘಟನೆ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಕಂಡುಬಂದಿದೆ.

Ad Widget . Ad Widget .

ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ.

Ad Widget . Ad Widget .

ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ ವೇಳೆ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿ, ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಪರಿಣಾಮ ಸಂಪೂರ್ಣ ಬಾಗಿಲಿಗೆ ಬೆಂಕಿ ಆವರಿಸಿದೆ. ಮಾ.12ರ ಪೂಜಾ ಕೈಂಕರ್ಯಗಳನ್ನು ನಡೆಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಘಟನೆಯಿಂದ ದೇವಸ್ಥಾನದ ಬಾಗಿಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *