ಸಮಗ್ರ ನ್ಯೂಸ್: ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಈ ಹಿಂದೆಯಿಂದ್ಲು ಒಳ್ಳೆಯ ಬಾಂಧವ್ಯ ಇತ್ತು. ಅಷ್ಟೇ ಅಲ್ಲದೆ ದರ್ಶನ್ ನಾ ಮಗ ಎಂದು ಸುಮಲತಾ ಪರಿಗಣಿಸಿದ್ದರು. ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು. ಆದರೆ, ಇತ್ತೀಚಿಗಿನ ಬೆಳವಣಿಗೆ ಸಾಕಷ್ಟು ಅನುಮಾನಗಳನ್ನು ಎಡೆಮಾಡಿಕೊಟ್ಟಿದೆ.
ಹೌದು ನಟ ದರ್ಶನ್ ಅವರು ಇನ್ಸ್ಟಾಗ್ರಾಮ್ನಲ್ಲಿ ಇಷ್ಟು ದಿನ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಆ ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಅವರು ಯಾರನ್ನು ಫಾಲೋ ಮಾಡದೇ ಇರೋದು ಹಲವು ಪ್ರಶ್ನೆ ಹುಟ್ಟಿ ಹಾಕಿದೆ .
ಅಷ್ಟೇ ಅಲ್ಲದೆ ದರ್ಶನ್ ಅನ್ಫಾಲೋ ಮಾಡಿದ ವಿಚಾರ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಂಗ್ಲಿಷ್ ಲೈನ್ಗಳನ್ನು ಅವರು ಇನ್ಸ್ಟಾಗ್ರಾಮ್ ಸ್ಟೇಟಸ್ಗೆ ಪೋಸ್ಟ್ ಮಾಡಿದ್ದಾರೆ. ‘ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ’ ಎಂದು ಸುಮಲತಾ ಬರೆದುಕೊಂಡಿದ್ದಾರೆ.
ಒಟ್ಟಾರೆಯಾಗಿ ಈ ಎಲ್ಲಾ ವಿಚಾರಗಳನ್ನು ನೋಡಿದಾಗ ಇವರಿಬ್ಬರ ಮಧ್ಯೆ ಬಿರುಕು ಮೂಡಿರುವುದು ಖಚಿತ ಎಂಬಂತಾಗಿದೆ.