ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ ಕೊಂಚ ಇಳಿಕೆಯಾಗಿದೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ ಹಾಗೂ ಇತರ ಗ್ರಾಮಗಳಲ್ಲಿ ಕೆಲ ಹೊತ್ತು ಗುಡುಗು ಸಹಿತ ತುಂತುರು ಮಳೆಯಾಗಿದೆ.

Ad Widget

ಇನ್ನು ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಳೆಯಾಗಿದ್ದು, ಕಾಸರಗೋಡು ಜಿಲ್ಲೆ ಅಲ್ಲಲ್ಲಿ ತುಂತುರು ಮಳೆಯಾಗುವ ಮೂಲಕ ಬಿಸಿಲ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ತಂಪರೆದಿದೆ.

Leave a Comment

Your email address will not be published. Required fields are marked *