ಸಮಗ್ರ ನ್ಯೂಸ್: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ವ್ಯಾಪ್ತಿಯ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.
ವಾಯುಭಾರ ಕುಸಿತದ ಪ್ರಭಾವ ಬೆಂಗಳೂರು ಹಾಗೂ ಕರ್ನಾಟಕದ ಮೇಲೂ ಆಗುತ್ತಿದ್ದು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ.
ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತಗಳು ಕಾಣಿಸಿಕೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಸೈಕ್ಲೋನ್ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ಕೊಡಲಾಗಿದೆ. ಬಾಂಗ್ಲಾದೇಶದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಐದು ದಿನಗಳಲ್ಲಿ ಭಾರತದ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.