ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಮಾ13 ರಂದು ರಾತ್ರಿ ನಡೆದಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ.
ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಹರಸಾಹಸ ಪಡುತ್ತಿದ್ದಾರೆ. ಅದನ್ನು ಸುರಕ್ಷಿತವಾಗಿ ಮರಳಿಸಲು ತಕ್ಕ ಮುನ್ನೆಚ್ಚರಿಕೆ ವಹಿಸಲಾಗಿದೆ.