ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ

ಸಮಗ್ರ ನ್ಯೂಸ್: ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.‌ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಗಂಭೀರಗವಾಗಿ ಗಾಯಗೊಂಡಿದ್ದಾರೆ.

Ad Widget ... ..

ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯ, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಲಮಾಣಿ ಅವರು ಇಳಿದಾಗ ಅದೇ ವೇಳೆ ಬಂದಂತಹ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ, ಕೈ, ಕಾಲುಗಳಿಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.

Ad Widget

ಕೂಡಲೇ ಲಮಾಣಿ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *