ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಾ.18 ರಂದು ನಡೆದಿದೆ.

Ad Widget ... ..

ಈ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದವರು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಎಂದು ಗುರುತಿಸಲಾಗಿದೆ.

Ad Widget

ಮಹಿಳೆಯ ಮೇಲೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಡಿಯೋವನ್ನು ಪರಿಶೀಲಿಸಿ, ಅದರಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಉಳಿದವರ ಪಾತ್ರದ ಬಗ್ಗೆ ವಿಡಿಯೋ ಮೂಲಕ ಪರಿಶೀಲನೆ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಡಾ ಕೆ.ಅರಣ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *