ಪರಪುರುಷನೊಂದಿಗೆ ಸಂಬಂಧ – ಮಹಿಳೆಯ ಬಟ್ಟೆಕಳಚಿ ಮೆರವಣಿಗೆ‌ ಮಾಡಿ ಅನಾಗರಿಕ ‌ವರ್ತನೆ

Ad Widget ... ..

ಜಾರ್ಖಂಡ್‌: ವಿವಾಹಿತ ಪುರುಷನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Ad Widget

ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಕುತ್ತಿಗೆಗೆ ಶೂಗಳ ಮಾಲೆ ಹಾಕಿ ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ಈ ಘಟನೆ ಡುಮ್ಕಾ ಜಿಲ್ಲೆಯ ರಣೀಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಈ ಘಟನೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ 12 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಲ್ಲಿಯವರೆಗೆ, ಆ ವ್ಯಕ್ತಿ ಮತ್ತು ಆತನ ಪತ್ನಿ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಆರೋಪಿ ವ್ಯಕ್ತಿಯು ತನ್ನಿಂದ 25,000 ರೂಪಾಯಿಗಳನ್ನು ಕಸಿದುಕೊಂಡಿದ್ದಾರೆ ಎಂದು ಆ ಮಹಿಳೆ ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *