ಸಮಗ್ರ ನ್ಯೂಸ್: ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಂತೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು.
ಬಳಿಕ ಇಬ್ಬರನ್ನು ರಿಲೀಸ್ ಮಾಡಿದ್ದರು. ಆದ್ರೀಗ ಮತ್ತೆ ಬಂಧಿಸಿ, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರನ್ನೂ ಪೊಲೀಸರು ಮತ್ತೆ ಬಂಧಿಸಿದ್ದರು. ವಿಚಾರಣೆ ವೇಳೆ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರೂ ಸಾಕ್ಷಿ ನಾಶ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ಇಬ್ಬರೂ ಪೊಲೀಸರು ಮತ್ತೆ ಬಂಧಿಸಿ, ಸ್ಥಳ ಮಹಜರು ನಡೆಸಿದರು. ಬಳಿಕ ಇಂದು (ಮಾರ್ಚ್ 26) ಮಧ್ಯರಾತ್ರಿ ಇಬ್ಬರನ್ನು ಪರಪ್ಪನ ಅಗ್ರಹಾರ ಜೈಲ್‌ಗೆ ಕಳುಹಿಸಲಾಗಿದೆ.
ಇಂದು (ಮಾರ್ಚ್ 26) ವಿನಯ್ ಗೌಡ ಹಾಗೂ ರಜತ್ ಕಿಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಇಬ್ಬರೂ ರೀಲ್ಸ್ ಮಾಡಿದ್ದ ಆರೋಪದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಇಬ್ಬರನ್ನೂ ಪೊಲೀಸರು ಬಂಧಿಸಲಾಗಿದೆ. ಈಗ ಸಾಕ್ಷಿ ನಾಶದ ಕೇಸ್ ಕೂಡ ಹಾಕಲಾಗಿದ್ದು, ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡುತ್ತಾ? ಇಲ್ಲ ಪೊಲೀಸರ ಕಸ್ಟಡಿಗೆ ನೀಡುತ್ತಾ? ಅನ್ನೋದನ್ನು ಗೊತ್ತಾಗಲಿದೆ.