ತಮಿಳುನಾಡು ಬಿಜೆಪಿ‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

ಸಮಗ್ರ ನ್ಯೂಸ್: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ.

. Ad Widget . Ad Widget

ಕೊಯಮತ್ತೂರಿನಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

. Ad Widget . . Ad Widget . Ad Widget

ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Leave a Comment

Your email address will not be published. Required fields are marked *