ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.
ಇಂದು ನಸುಕಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.