ಡಿಸೇಲ್ ದರ ಏರಿಕೆ.. ಏ.14 ರಂದು ಲಾರಿ ಮಾಲೀಕರ ಮುಷ್ಕರ..!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇತ್ತೀಚೆಗೆ ಬೆಲೆ ಏರಿಕೆಗಳದ್ದೆ ಹಾವಳಿಯಾಗಿತ್ತು. ಇದರಿಂದ ನೊಂದಿರುವ ಜನಸಾಮಾನ್ಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅದರಲ್ಲು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget .

ಇದೀಗ ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಕೆರಳಿ ಕೆಂಡವಾಗಿರುವ ಲಾರಿ ಮಾಲೀಕರು, ಕೇಂದ್ರ ಸರ್ಕಾರ ಟೋಲ್ ದರ ಹೆಚ್ಚಳ ಮಾಡಿದೆ. ಇದರಿಂದ ಪ್ರತಿ ತಿಂಗಳು ಸಾವಿರಾರು ರುಪಾಯಿ ಹೊರೆ ಆಗಲಿದೆ. ಇಂತಹ ಸಂದರ್ಭದಲ್ಲೇ ಮತ್ತೆ ರಾಜ್ಯ ಸರ್ಕಾರ ಡೀಸೆಲ್ ದರ ಹೆಚ್ಚಳ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

Ad Widget . Ad Widget .

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡನೇ ಬಾರಿ ಡೀಸೆಲ್ ದರ ಹೆಚ್ಚಳ ಮಾಡಿದೆ. ಕಳೆದ ವರ್ಷ ಜೂನ್- 15 ಕ್ಕೆ ಮೂರು ರುಪಾಯಿ, ಈ ವರ್ಷ ಏಪ್ರಿಲ್- 1 ರಂದು ಎರಡು ರುಪಾಯಿ ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರು ವಿಷ ಕುಡಿಯುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ 6 ಲಕ್ಷ ಲಾರಿಗಳಿವೆ. ಎಲ್ಲ ಲಾರಿಗಳನ್ನು ಟೋಲ್ ಮತ್ತು ಹೈವೇಗಳಲ್ಲಿ ಬಿಟ್ಟು ಮುಷ್ಕರ ಮಾಡುತ್ತೇವೆ. ನಮ್ಮ ಮುಷ್ಕರದಲ್ಲಿ ಪೆಟ್ರೋಲ್, ಡೀಸೆಲ್ ಬಂಕ್ಗಳು ಬಂದ್ ಆಗಲಿದೆ. ಡೀಸೆಲ್ ಬೆಲೆ ಇಳಿಕೆ ಮಾಡಲು ಈಗಾಗಲೇ ಗಡುವು ನೀಡಿದ್ವಿ. ಆದರೆ ಸರ್ಕಾರ ಡಿಸೇಲ್ ದರ ಕಡಿಮೆ ಮಾಡಲು ಮುಂದಾಗಿಲ್ಲ. ಹೀಗಾಗಿ ಏಪ್ರಿಲ್ 14 ರಂದು ರಾಜ್ಯಾದ್ಯಂತ ಮುಷ್ಕರ ಮಾಡುತ್ತೇವೆ ಎಂದು ರಾಜ್ಯ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಹೇಳಿದರು.

ಬಂದ್ ನಿಂದ ಏರ್ ಪೋರ್ಟ್ ಟ್ಯಾಕ್ಸಿ , ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಬಂದ್. 5 ಲಕ್ಷ ಲಾರಿ ಬಂದ್, ಅಕ್ಕಿ ಲೊಡ್, ಗೂಡ್ಸ್, ಪೆಟ್ರೋಲ್ ಡಿಸೇಲ್ ಲಾರಿ ಬಂದ್, ⁠ಚಾಲಕರ ಸಂಘದಿಂದ ಬಂದ್
ಹೊರ ರಾಜ್ಯದಿಂದಲೂ ವಾಹನ ಬರುವುದಿಲ್ಲ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *