ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಮಳೆ ಮುಂದುವರಿದಿದ್ದು, ಮುಂದಿನ ಒಂದು ವಾರವೂ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 12ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ.
ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಾವಣಗೆರೆ, ಮತ್ತು ತುಮಕೂರಿನಲ್ಲಿ ಮಳೆ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗುರ ಮಳೆಯೊಂದಿಗೆ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹೊನ್ನಾವರದಲ್ಲಿ 33.0 ಡಿಗ್ರಿ ಮತ್ತು ಪಣಂಬೂರಿನಲ್ಲಿ 34.0 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಿದೆ.
ರ್ನಾಟಕದಲ್ಲಿ ಏಪ್ರಿಲ್ 12ರವರೆಗೆ ಮಳೆ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ರೈತರಿಗೆ ಇದು ಸಿಹಿಸುದ್ದಿಯಾದರೆ, ಮಳೆಯಿಂದ ಉಂಟಾದ ಹಾನಿ ಮತ್ತು ವಿದ್ಯುತ್ ಸಮಸ್ಯೆಗಳು ಗಮನಾರ್ಹವಾಗಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜನರು ಸಿದ್ಧತೆ ಮಾಡಿಕೊಳ್ಳುವುದು ಉತ್ತಮ.