ಪುತ್ತೂರು: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿದ ತೆಂಗಿನಮರ| ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಪಾರು

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಏ.8ರ ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ.

Ad Widget .

ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಘಟನೆಯಿಂದ ಹಲವು ವಿದ್ಯುತ್ ಕಂಬಗಳು ದರೆಗುರುಳಿವೆ.

Ad Widget . Ad Widget .

ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ಮಳೆ ಜೊತೆ ಬೀಸಿದ ಗಾಳಿಗೆ ಪುತ್ತೂರು ಬಪ್ಪಳಿಗೆ ಸಮೀಪದ ಗುಂಪಕಲ್ಲಿನಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದಿದೆ ಅಪಾರ ಪ್ರಮಾಣ ನಷ್ಟ ಸಂಭವಿಸಿದೆ.

Leave a Comment

Your email address will not be published. Required fields are marked *