ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮುಂದಿನ 4 ದಿನಗಳವರೆಗೆ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಇನ್ನು ಏ.15ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ (Rain News) ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ.16ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.18ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.19ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.