ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಸಲ್ಲಿಸಿದೆ. ಅವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ.

Ad Widget .

ಎನ್‌ಐಎ ತನ್ನ ಎರಡನೇ ಪೂರಕ ಚಾರ್ಜ್‌ಶೀಟ್‌ನಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಆರೋಪ ಹೊರಿಸಿದೆ. ಇದರೊಂದಿಗೆ, ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾದ ಒಟ್ಟು ಆರೋಪಿಗಳ ಸಂಖ್ಯೆ 27ಕ್ಕೆ ಏರಿದ್ದು, ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

Ad Widget . Ad Widget .

ಆರೋಪಪಟ್ಟಿ ಸಲ್ಲಿಸಲಾದ ನಾಲ್ವರಲ್ಲಿ ಮೂವರು ತಲೆಮರೆಸಿಕೊಂಡಿರುವ ಆರೋಪಿಗಳು ಸೇರಿದ್ದಾರೆ. ಅವರನ್ನು ಅಬ್ದುಲ್ ನಾಸಿರ್, ನೌಶಾದ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ” ಎಂದು ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *