ಸಮಗ್ರ ನ್ಯೂಸ್: ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಶಿಕ್ಷೆ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಜನಿವಾರ ಪ್ರಕರಣ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ, ಧರ್ಮಾಚಾರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಾಗಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಧರ್ಮ, ಧರ್ಮಾಚರಣೆ ಉಳಿಸಲು ಸರ್ಕಾರ ಬದ್ಧವಾಗಿದ್ದು, ಇದನ್ನು ಶೃಂಗೇರಿ ಶ್ರೀಗಳ ಪಾದಾರವಿಂದಗಳಲ್ಲಿ ಹೇಳುತ್ತಿದ್ದೇನೆ ಎಂದು ಡಿಸಿಎಂ ತಿಳಿಸಿದ್ದಾರೆ.