ಪಹಲ್ಗಾಮ್ ನಲ್ಲಿ ಉಗ್ರರ ದಾಳಿ: ಶಂಕಿತ ಉಗ್ರರ ಫೋಟೋ ರಿಲೀಸ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಿದ್ದರು. ಒಟ್ಟು 26 ಮಂದಿಯನ್ನು ಹತ್ಯೆ ಮಾಡಲಾಗಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ 3 ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ.

Ad Widget .

ಭಯೋತ್ಪಾದಕ ದಾಳಿಯಲ್ಲಿ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ. ಭದ್ರತಾ ಪಡೆಗಳು ಬೃಹತ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಮತ್ತು ಅರಣ್ಯ ಪ್ರದೇಶವನ್ನು ಬಳಸಿಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿವೆ.

Ad Widget . Ad Widget .

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ. ಸೈಫುಲ್ಲಾ ಖಾಲಿದ್ನನ್ನು ಸೈಫುಲ್ಲಾ ಕಸೂರಿ ಎಂದೂ ಕರೆಯುತ್ತಾರೆ. ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್ಗೆ ಆಪ್ತ ಎಂದು ಪರಿಗಣಿಸಲಾಗಿದೆ.

Leave a Comment

Your email address will not be published. Required fields are marked *