ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ ತುಸು ತಂಪು ಕಂಡಿತ್ತು.
ಪುತ್ತೂರು, ಬಂಟ್ವಾಳ, ಸಂಪ್ಯ, ಉಪ್ಪಿನಂಗಡಿ, ಹಿರೇಬಂಡಾಡಿ, ಸುಳ್ಯ, ಕರಿಕ್ಕಳ, ಪೆರ್ಲಂಪಾಡಿ, ಬೆಳ್ಳಾರೆ, ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.
ಕರಾವಳಿ ಭಾಗದಲ್ಲಿ ನಾಲ್ಕು ದಿನಗಳ ಕಾಲ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದ್ದು, ಎ.28 ರಿಂದ ಮೇ 1ರ ವರೆಗೆ ಭಾರತೀಯ ಹವಾಮಾನ ಇಲಾಖೆ “ಎಲ್ಲೋ ಅಲರ್ಟ್’ ಘೋಷಿಸಿದೆ. ಮಂಗಳೂರಿನಲ್ಲಿ ರವಿವಾರ 33.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಕಡಿಮೆ ಮತ್ತು 22.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.9 ಡಿ.ಸೆ. ತಾಪಮಾನ ಕಡಿಮೆ ಕಂಡಿತ್ತು.