ಸಮಗ್ರ ನ್ಯೂಸ್: ಮಂಗಳೂರು ಸಮೀಪದ ಕುಡುಪು ಬಳಿ ನಡೆದಿದ್ದ ಘರ್ಷಣೆಯಲ್ಲಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ. ಪಿ ಮತ್ತು ಕಾನ್ಸ್‌ಟೇಬಲ್ ಯಲ್ಲಾಲಿಂಗ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಆರಂಭದಲ್ಲಿ ಇನ್ಸ್‌ಪೆಕ್ಟರ್ ಶಿವಕುಮಾರ್ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ದೂರು ನೀಡಿದ್ದು, ಈ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಪ್ರಕರಣ ಸಂಬಂಧ 23 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.