ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಪಾಲಿಟಿಕ್ಸ್ ನಡೆಯುತ್ತಿದೆ. ಹೌದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲನ್ನು ಸ್ವೀಕರಿಸಿ ಈ ಕ್ರಮ ಕೈಗೊಂಡಿರುವುದಾಗಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

Ad Widget .

ಯತ್ನಾಳ್ ಸವಾಲುಗಳನ್ನು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ಅವರು ನಮ್ಮ ಪೂರ್ವಜರ ಮನೆತನದ ಹೆಸರಿನ ಬಗ್ಗೆ ತಪ್ಪಾಗಿ ಮಾತನಾಡಿದ್ದರು. ಅವರೂ ಸಹ ರಾಜೀನಾಮೆ ನೀಡಿ ಅದು ಅಂಗೀಕಾರವಾದರೆ ಮಾತ್ರ ತಮ್ಮ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ.

Ad Widget . Ad Widget .

ರಾಜೀನಾಮೆ ಪತ್ರದಲ್ಲೇನಿದೆ?

ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್‌) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ’’ ಎಂದು ಸ್ಪೀಕರ್ ಯು.ಟಿ ಖಾದರ್​ಗೆ ಬರೆದ ಪತ್ರದಲ್ಲಿ ಶಿವಾನಂದ ಪಾಟೀಲ್ ಉಲ್ಲೇಖಿಸಿದ್ದಾರೆ.

Leave a Comment

Your email address will not be published. Required fields are marked *