ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಸಮಗ್ರ ನ್ಯೂಸ್: ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ (ICC) ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

Ad Widget .

ವಾಸ್ತವವಾಗಿ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ರೋಹಿತ್ ಶರ್ಮಾ ಈ ಮಾದರಿಗೆ ವಿದಾಯ ಹೇಳಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Ad Widget . Ad Widget .

ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಸ್ಟೋರಿ ಪೋಸ್ಟ್ ಮಾಡಿದ್ದು ಅದರಲ್ಲಿ ಅವರು ತಮ್ಮ ಟೆಸ್ಟ್ ಕ್ಯಾಪ್ ಸಂಖ್ಯೆ 280 ರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಅವರು ತಮ್ಮ ನಿವೃತ್ತಿಯನ್ನು ಘೋಷಿಸಿದ್ದು, ‘ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ನಿಮಗೆಲ್ಲರಿಗೂ ಹೇಳಲು ಬಯಸುತ್ತೇನೆ. ನನ್ನ ದೇಶವನ್ನು ಬಿಳಿ ಬಟ್ಟೆ ಧರಿಸಿ ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಇಷ್ಟು ವರ್ಷಗಳ ಕಾಲ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಏಕದಿನ ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರೆಸುತ್ತೇನೆ’ ಎಂದು ರೋಹಿತ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *