ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ವಿವಾಹ ನೆರವೇರಿತು. ಸದ್ದಿಲ್ಲದೆ ಇವರ ವಿವಾಹ ವಿಚಾರ ಕೇಳಿ ಅಭಿಮಾನಿಗಳಿಗೆ ಶಾಕ್ ಆಗಿದ್ದಂತ್ತು ನಿಜ. ಇದೀಗ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ದೊಡ್ಡ ಆರೋಪ ಒಂದನ್ನು ಮಾಡಿದ್ದಾರೆ. ‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ’ ಎಂದು ಅವರು ಆರೋಪಿಸಿದ್ದಾರೆ.
ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ’ ಎಂದು ಬಾಲಕೃಷ್ಣ ಹೇಳಿದ್ದಾರೆ.
ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನನ್ನು ಮನೆಯಲ್ಲಿ ಬಿಟ್ಟು ಅಮ್ಮ-ಮಗಳು ಬೀಗ ಹಾಕಿ ಹೋಗಿದ್ದರು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ’ ಎಂದು ಬಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರ ಪತಿ ನಮ್ಮ ಮನೆಯಲ್ಲಿ ಇದ್ದವನು. ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ. ಈಗ ನನ್ನ ಕುಟುಂಬದ ಮಾನ ಮರ್ಯಾದೆ ಕೂಡ ತೆಗೆದರು’ ಎಂದು ಬೇಸರ ಹೊರಹಾಕಿದ್ದಾರೆ ಬಾಲಕೃಷ್ಣ.
‘ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಈಕೆ ಹಣ ಹೊಡೆದಿದ್ದಾಳೆ. ಆ ಹಣವನ್ನು ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಾಳೆ. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ, ಬಾಂಡ್ ಮೇಲೆ ಸಾಲ ಪಡೆದಿದ್ದಾಳೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ’ ಆಕೆ ನನ್ನ ಜೀವನದಲ್ಲಿ ಬರಲೇ ಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲಕೃಷ್ಣ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಎಂದು ಚೈತ್ರಾ ಅವರ ತಂದೆ ಹೇಳಿದ್ದಾರೆ.