ಸಮಗ್ರ ನ್ಯೂಸ್: ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 22, 24, ಮತ್ತು 18 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ.
ಇಂದು ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಒಂದು ವೇಳೆ ನೀವು ಚಿನ್ನ ಖರೀದಿಗೆ ಪ್ಲಾನ್ ಮಾಡುತ್ತಿದ್ರೆ, ಇಂದು ಖರೀದಿಸಬಹುದಾಗಿದೆ. ಇಂದಿನ 22, 24 ಮತ್ತು 18 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಮದುವೆ ಸೀಸನ್ ಶುರುವಿನ ಬೆನ್ನಲ್ಲೇ ಚಿನ್ನದ ಬೆಲೆ ಕೂಡ ದಿನ ಕಳೆದಂತೆ ಇಳಿಕೆ ಕಾಣುತ್ತಿದೆ. ಇಂದು (ಮೇ.15) ಚಿನ್ನದ ಬೆಲೆ ತೀವ್ರವಾಗಿ ಕುಸಿದಿದೆ. ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ 2,130 ರೂ.ನಷ್ಟು ಕುಸಿದರೆ, 22 ಕ್ಯಾರೆಟ್ ಚಿನ್ನದ 1,950 ರೂ.ನಷ್ಟು ಕುಸಿದಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಕುಸಿದಿದೆ. ಒಂದು ಕೆಜಿ ಬೆಳ್ಳಿ 1,000 ರೂ. ಕುಸಿತ ಕಂಡಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,610 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ86,100 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,950 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 19,500 ರೂ.ಗಳಷ್ಟ ಇಳಿಕೆಯಾಗಿ 8,61,000 ರೂ.ಗಳು ತಲುಪಿದೆ.