ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇದೀಗ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.
ಪೋಕ್ಸೊ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಗೆ ನ್ಯಾಯ ಒದಗಿಸಲು ಸಮಗ್ರ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಪೊಲೀಸ್ ಆಯುಕ್ತ ಹೇಳಿದ್ದಾರೆ.