ಸಮಗ್ರ ನ್ಯೂಸ್: ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಕೋಟಿಗಟ್ಟಲೆ ಮೊತ್ತದ ಚಿನ್ನ ದುಬೈಯಿಂದ ಕಳ್ಳದಾರಿಯಲ್ಲಿ ತಂದ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿ ಕೆಲವು ತಿಂಗಳಿಂದ ಜೈಲಿನಲ್ಲಿದ್ದ ರನ್ಯಾ ರಾವ್‌ಗೆ ನಿನ್ನೆಯಷ್ಟೇ ನ್ಯಾಯಾಲಯ ಜಾಮೀನು ನೀಡಿತ್ತು. ಇದರ ಬೆನ್ನಿಗೆ ಇಂದು ಗೃಹ ಸಚಿವರ ಮೆಡಿಕಲ್ ಕಾಲೇಜಿಗೇ ಇ.ಡಿ. ದಾಳಿಯಾಗಿರುವುದು ಭಾರಿ ಕುತೂಹಲ ಕೆರಳಿಸಿದೆ.