ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣದಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇದೀಗ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ.
ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು.
ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ.